ಕಾಸರವಳ್ಳಿ ಗ್ರಾಮದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು! Election

ಕಾಸರವಳ್ಳಿ ಗ್ರಾಮದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು!

ತೀರ್ಥಹಳ್ಳಿ : ತೀರ್ಥಮುತ್ತೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾಸರವಳ್ಳಿ ಗ್ರಾಮದ ಪರಿಶಿಷ್ಠ ಪಂಗಡ ಮೀಸಲು ಕ್ಷೇತ್ರದ ಉಪಚುನಾವಣೆ ನವೆಂಬರ್ 23 ರ ಶನಿವಾರ ಮತದಾನ ನಡೆದಿತ್ತು. ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕಾಸರವಳ್ಳಿ ಶ್ರೀನಿವಾಸ್ ಪತ್ನಿ ರೂಪ ಶ್ರೀನಿವಾಸ್ ಸ್ಪರ್ಧೆ ಮಾಡಿದ್ದು  ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜಯಲಕ್ಷ್ಮಿ ರುದ್ರಣ್ಣ ಸ್ಪರ್ಧೆ ಮಾಡಿದ್ದರು.

ನವೆಂಬರ್ 26 ರ ಇಂದು ನಡೆದ ಮತ ಎಣಿಕೆಯಲ್ಲಿ ರೂಪ ಶ್ರೀನಿವಾಸ್ 17 ಮತಗಳ ಅಂತರದಿಂದ ಜಯಗಳಿಸಿದ್ದಾರೆ.



Previous Post Next Post