ಡಿ. 29 ರಂದು ಕುಪ್ಪಳಿಯಲ್ಲಿ ವಿಶ್ವಮಾನವ ದಿನಾಚರಣೆ
ತೀರ್ಥಹಳ್ಳಿ : ಡಿ. 29 ರಂದು ಕುವೆಂಪು ಅವರ 120 ನೇ ಜನ್ಮ ದಿನೋತ್ಸವ ಅಂಗವಾಗಿ ಬೆಳಿಗ್ಗೆ10 ಗಂಟೆಗೆ ಕವಿ ಶೈಲದಲ್ಲಿ ಕವಿ ನಮನ ಹಾಗೂ ಬೆಳಗ್ಗೆ 11 ಗಂಟೆಗೆ ಕುಪ್ಪಳಿಯ ಹೇಮಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ರಾಷ್ಟ್ರಕವಿ ಕುವೆಂಪು ಪ್ರತಿಷ್ಟಾನ ಕುಪ್ಪಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕದ ಉಪಮಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ನೆರವೇರಿಸಲಿದ್ದಾರೆ.
ಆ ಸಂದರ್ಭದಲ್ಲಿ ಶ್ರೀ ರಾಮಾಯಣ ದರ್ಶನಂ ಕೃತಿಯನ್ನು ಸಹ ಅವರು ಬಿಡುಗಡೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ತಂಗಡಗಿ ಶಿವರಾಜ್ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ.
ಆ ದಿನ ಸಂಜೆ 6 ಗಂಟೆಗೆ ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕುವೆಂಪುರವರ ನಾಟಕ ಪ್ರದರ್ಶನ ಜರುಗಲಿದೆ.
