ರಘು ದೀಕ್ಷಿಕ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭ!
ಮೇಲಿನಕುರುವಳ್ಳಿಯ ವಾಗ್ದೇವಿ ಕಾಲೇಜಿನಲ್ಲಿ ಸಂಗೀತ ಸಂಭ್ರಮ
ತೀರ್ಥಹಳ್ಳಿ : ವಾಗ್ದೇವಿ ಶಿಕ್ಷಣ ಸಂಸ್ಥೆಯ 25 ನೇ ವರ್ಷದ ಬೆಳ್ಳಿ ಹಬ್ಬದ ಅಂಗವಾಗಿ ಮೇಲಿನಕುರುವಳ್ಳಿಯ ವಾಗ್ದೇವಿ ಕಾಲೇಜು ಆವರಣದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದ್ದು ಈ ಸಂಭ್ರಮಕ್ಕೆ ಅದ್ದೂರಿ ತಯಾರಿ ಆಗಿದ್ದು ಕ್ಷಣಗಣನೆ ಆರಂಭವಾಗಿದೆ.
ಇದನ್ನು ಓದಿ - ವಾಗ್ದೇವಿ ಶಿಕ್ಷಣ ಸಂಸ್ಥೆ ವತಿಯಿಂದ ಬೆಳ್ಳಿ ಹಬ್ಬ ಆಚರಣೆ
ಸಂಜೆ 5:30 ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕರಾದ ಆರಗ ಜ್ಞಾನೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಪ್ಪ.ಎಸ್ ಗುಂಡುಪಲ್ಲಿ, ತೀರ್ಥಹಳ್ಳಿಯ ಡಿವೈಎಸ್'ಪಿ ಗಜಾನನ ವಾಮನ ಸುತಾರ ಸೇರಿ ಹಲವರು ಭಾಗಿಯಾಗಲಿದ್ದಾರೆ.
ಕಾಲೇಜಿನ ಮಾಜಿ ಸಿಬ್ಬಂದಿಗಳು ಹಾಗೂ ಹಳೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಖ್ಯಾತ ಸಂಗೀತಗಾರರಾದ ರಘು ದೀಕ್ಷಿತ್ ಮತ್ತು ತಂಡದವರಿಂದ ಸಂಗೀತದ ರಸದೌತಣ ಕಾರ್ಯಕ್ರಮ ನಡೆಯಲಿದೆ.
ಇದನ್ನು ಓದಿ ವಾಗ್ದೇವಿ ಶಿಕ್ಷಣ ಸಂಸ್ಥೆಗೆ ಬೆಳ್ಳಿ ಹಬ್ಬದ ಸಂಭ್ರಮ - ಏನೆಲ್ಲಾ ಕಾರ್ಯಕ್ರಮ? - ಯಾರೆಲ್ಲಾ ಆಗಮನ!?
ಈಗಾಗಲೇ ಕಾರ್ಯಕ್ರಮದ ಸಿದ್ಧತೆಗಳು ನಡೆದಿದ್ದು ಸಂಗೀತ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ರಘು ದೀಕ್ಷಿತ್ ಮತ್ತು ತಂಡದವರು ಈಗಾಗಲೇ ಪೂರ್ವ ತಯಾರಿ ನಡೆಸುತ್ತಿದ್ದು ಈ ಒಂದು ಅದ್ದೂರಿ ಕಾರ್ಯಕ್ರಮಕ್ಕೆ ಮೂರರಿಂದ ನಾಲ್ಕು ಸಾವಿರ ಜನ ಸೇರುವ ನಿರೀಕ್ಷೆ ಇದೆ.
%20(4)%20(10)%20(2).jpg)