ಶಿವಮೊಗ್ಗದಲ್ಲಿ 21 ಲಕ್ಷ ರೂ. ಮೌಲ್ಯದ ಗಾಂಜಾ ಸುಟ್ಟು ಹಾಕಿದ ಪೊಲೀಸರು
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾದ್ಯಂತ 43 NDPS ಪ್ರಕರಣಗಳಲ್ಲಿ ಜಪ್ತಿ ಮಾಡಿದ್ದ 21.84 ಲಕ್ಷ ರೂ. ಮೌಲ್ಯದ 56.740 ಕೆಜಿ ಗಾಂಜಾವನ್ನು ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷರೂ ಆದ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಸಮ್ಮುಖದಲ್ಲಿ ಗುರುವಾರ ನಾಶಪಡಿಸಲಾಯಿತು.
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಪ್ರಕರಣ ದಾಖಲಿಸಿ 21,84,660 ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದು ಗುರುವಾರ ಬೆಳಗ್ಗೆ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿಯಲ್ಲಿ ನಾಶಪಡಿಸಲಾಯಿತು.
