ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಬರ್ಬರ ಕೊ*ಲೆ crime

 ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಬರ್ಬರ ಕೊ*ಲೆ



ಶಿವಮೊಗ್ಗ : ಅಣ್ಣನಿಂದಲೇ ತಮ್ಮನ  ಬರ್ಬರ ಹತ್ಯೆಯಾಗಿರುವ ಘಟನೆ ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.




ಗಿರೀಶ್‌ ನಾಯ್ಕ (30) ಮೃತಪಟ್ಟ ದುರ್ದೈವಿ.

ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಹತ್ಯೆ ಮಾಡಿದ್ದಾರೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. 


ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

Previous Post Next Post