ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರ ಸಾವು , ನಾಲ್ವರ ಸ್ಥಿತಿ ಗಂಭೀರ jeep

 ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರ ಸಾವು , ನಾಲ್ವರ ಸ್ಥಿತಿ ಗಂಭೀರ



ಸೊರಬ : ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.


ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌ ಡಿಕ್ಕಿ ಹೊಡೆದ ಪರಿಣಾಮ ಗದ್ದೆಗೆ ಉರುಳಿ ಪಲ್ಟಿಯಾಗಿದೆ.


ಚಿಕ್ಕಕಣ್ಣೂರು ಗ್ರಾಮದ ಹನುಮಂತಪ್ಪ (50) . ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲ್ಲೂರು ವಡ್ಡಿಗೇರಿ ಗ್ರಾಮದ ಲಕ್ಷ್ಮವ್ವ (46) ಮತ್ತು ಕಣಸೋಗಿ ಗ್ರಾಮದ ರೇಣುಕಮ್ಮ . (65) ಶಿಕಾರಿಪುರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.


ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post Next Post