‘ಪಬ್ಲಿಕ್‌ ಟಿವಿ’ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್‌ ನಿಧನ Public tv Reporter

 ‘ಪಬ್ಲಿಕ್‌ ಟಿವಿ’ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್‌ ನಿಧನ



ಶಿವಮೊಗ್ಗ: ‘ಪಬ್ಲಿಕ್ ಟಿವಿ’ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಶಿಧರ್ ಇಂದು (ಶನಿವಾರ) ಸಂಜೆ ಅಕಾಲಿಕ ನಿಧನ ಹೊಂದಿದ್ದಾರೆ.


ಪಬ್ಲಿಕ್ ಟಿವಿಯಲ್ಲಿ ಕಳೆದ 6 ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಶಶಿಧರ್ ಮೂಲತಃ ಅರಸೀಕೆರೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದವರಾಗಿದ್ದು, 40 ವರ್ಷ ವಯಸ್ಸಾಗಿತ್ತು.


ಮೃತರು ಪತ್ನಿ, ತಂದೆ-ತಾಯಿಯನ್ನು ಅಗಲಿದ್ದಾರೆ. ಶಶಿಧರ್ ಕಳೆದ 16 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು.

Previous Post Next Post