ದಕ್ಷಿಣ ಏಷ್ಯಾ ರಾಷ್ಟ್ರಗಳ ಮಾಸ್ಟರ್ಸ್ ಅಥ್ಲೆಟಿಕ್ಸ್: ಸಾಧನೆಗೈದ ಶಿಕ್ಷಕಿ ಜ್ಯೋತಿ ಹೆಚ್.ಎಂ
ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಸಮೀಪದ ಬಾಳೆಹಳ್ಳಿ-ತಲ್ಲೂರ್ ಅಂಗಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜ್ಯೋತಿ ಹೆಚ್.ಎಂ. ಜನವರಿ 10 ರಿಂದ 12 ರವರೆಗೆ ಮಂಗಳೂರಿನಲ್ಲಿ ಜರುಗಿದ ಮೊದಲ ದಕ್ಷಿಣ ಏಷ್ಯಾ ರಾಷ್ಟ್ರಗಳ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್- 2025 ರಲ್ಲಿ ಭಾರತವನ್ನು ಪ್ರತಿನಿಧಿಸಿ ಅದ್ಭುತ ಸಾಧನೆ ಮಾಡಿದ್ದಾರೆ.
ಇವರು 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, 4×400 ಮೀಟರ್ ರಿಲೇನಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಇವರ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ , ತಾಲೂಕಿನ ಶಿಕ್ಷಕ ವೃಂದ ಹಾಗೂ ಕ್ರೀಡಾ ಪ್ರೇಮಿಗಳು ಅಭಿನಂದನೆ ಸಲ್ಲಿಸಿದ್ದಾರೆ.
