ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಆರ್ ಎಂ ಮಂಜುನಾಥ್ ಗೌಡರು RMM

 ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಆರ್ ಎಂ ಮಂಜುನಾಥ್ ಗೌಡರು 



ತೀರ್ಥಹಳ್ಳಿ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಕೋಟ್ಯಾಂತರ ಜನ ಪುಣ್ಯಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಇಂದು ಮಹಾಶಿವರಾತ್ರಿ ಜೊತೆಗೆ ಮಹಾ ಕುಂಭ ಮೇಳಕ್ಕೆ ಅಂತ್ಯ ಬೀಳಲಿದೆ.


ಈಗಾಗಲೇ ಕರ್ನಾಟಕದ ಪ್ರಮುಖ ರಾಜಕಾರಣಿಗಳು ಸೇರಿದಂತೆ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಇಂದು ಶಿವರಾತ್ರಿ ಅಂಗವಾಗಿ ತೀರ್ಥಹಳ್ಳಿಯ ಪ್ರಭಾವಿ ಕಾಂಗ್ರೆಸ್ ಮುಖಂಡರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರು ಆಗಿರುವ ಆರ್ ಎಂ ಮಂಜುನಾಥ್ ಗೌಡರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.


ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ಭೇಟಿ ಕೊಟ್ಟ ಫೋಟೋ ವೊಂದನ್ನು ಮಂಜುನಾಥ್ ಗೌಡರು ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈಗ ಅವರ ಆತ್ಮೀಯರಾಗಿರುವ ಆರ್  ಎಂ ಎಂ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.




Previous Post Next Post