ರಾಮೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ ಹೇಗಿರುತ್ತೆ ಪೂಜೆ - ಜಾಗರಣೆ..!
ತೀರ್ಥಹಳ್ಳಿ : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಾಳೆ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಹೋಮ ಹವನಗಳು ನಡೆಯಲಿದ್ದು ಜಾಗರಣೆ ಸಹ ನಡೆಯಲಿದೆ.
ನಾಳೆ ಬೆಳಗ್ಗೆ ರಾಮೇಶ್ವರನಿಗೆ ಫಲ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ವಿಶೇಷ ಪೂಜೆ ಮಹಾಮಂಗಳಾರತಿ ನಡೆಯಲಿದೆ. ಬುಧವಾರ ಸಂಜೆಯಿಂದ ಗುರುವಾರ ಬೆಳಗ್ಗೆವರೆಗೂ ರಾಮೇಶ್ವರನಿಗೆ ಅಭಿಷೇಕ ನಡೆಯಲಿದೆ. ಗುರುವಾರ ಬೆಳಗ್ಗೆ ವಿಶೇಷ ಅಲಂಕಾರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.
ಬುಧವಾರ ಸಂಜೆ ಸೂರ್ಯಸ್ಥದಿಂದ ಗುರುವಾರ ಬೆಳಗ್ಗೆ ಸೂರ್ಯೋದಯದವರೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಭಜನೆ ಕಾರ್ಯಕ್ರಮ ನಡೆಯಲಿದೆ. ಗುರುವಾರ ಸಂಜೆ ರಾಮೇಶ್ವರ ದೇವರ ಪುರೋತ್ಸವ ಜರುಗಲಿದೆ. ಈ ಎಲ್ಲಾ ದೇವತಾ ಕಾರ್ಯದಲ್ಲಿ ಭಕ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ದೇವರ ಅನುಗ್ರಹಕ್ಕೆ ಪಾತ್ರರಾಗಲು ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ.
