ನಾಳೆ ಅರ್ಧ ದಿನ ಶಿವಮೊಗ್ಗ ಸಿಟಿ ಬಂದ್, ಅಂಗಡಿ ಮುಂಗಟ್ಟು ಸಂಪೂರ್ಣ ಕ್ಲೋಸ್ shivamogga bandh

 ನಾಳೆ ಅರ್ಧ ದಿನ ಶಿವಮೊಗ್ಗ ಸಿಟಿ ಬಂದ್, ಅಂಗಡಿ ಮುಂಗಟ್ಟು ಸಂಪೂರ್ಣ ಕ್ಲೋಸ್



ಶಿವಮೊಗ್ಗ : ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಮಂಜುನಾಥ ಅವರ ಮೃತದೇಹ ಗುರುವಾರ (ನಾಳೆ ) ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಅಂತ್ಯ ಸಂಸ್ಕಾರದ ಹಿನ್ನೆಲೆ ಅರ್ಧ ದಿನ ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದ್ದಾರೆ.


ಬೆಳಗ್ಗೆ 9 ಗಂಟೆ ಹೊತ್ತಿಗೆ ಮೃತದೇಹ ಬರಲಿದೆ. ಮಧ್ಯಾಹ್ನ 12.30ರವರೆಗೆ ಮನೆ ಬಳಿ ಅಂತಿಮ ವಿಧಿವಿಧಾನ ಮತ್ತು ಸಾರ್ವಜನಿಕ ದರ್ಶನ ಇರಲಿದೆ. ಆ ಬಳಿಕ ನಗರದಲ್ಲಿ ಮೆರವಣಿಗೆ ನಡೆಯಲಿದೆ. ಸಾಗರ ರಸ್ತೆ, ಐಬಿ ಸರ್ಕಲ್, ಕುವೆಂಪು ರಸ್ತೆ, ಜೈಲ್ ವೃತ್ತ, ನೆಹರೂ ರಸ್ತೆ, ಬಿ.ಹೆಚ್‌.ರಸ್ತೆ, ಶಂಕರಮಠ ಸರ್ಕಲ್‌ನಿಂದ ರೋಟರಿ ಚಿತಾಗಾರಕ್ಕೆ ತಲುಪಲಿದೆ ಎಂದರು.


ಮಂಜನಾಥ ರಾವ್ ಅವರ ಅಂತ್ಯಸಂಸ್ಕಾರ ಮತ್ತು ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್ ಮಾಡಲಾಗುತ್ತದೆ  ಎಂದು ತಿಳಿಸಿದ್ದಾರೆ.

Previous Post Next Post