ತೀರ್ಥಹಳ್ಳಿ ಸಹ್ಯಾದ್ರಿ ಪ್ರೌಢಶಾಲೆಗೆ ಶೇ 100% ಫಲಿತಾಂಶ
ತೀರ್ಥಹಳ್ಳಿ: 2024-25 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪಟ್ಟಣದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯು ಪ್ರತಿ ವರ್ಷದಂತೆ ಈ ಬಾರಿಯು ರಾಜ್ಯಮಟ್ಟದ ರ‌್ಯಾಂಕ್ ಅನ್ನು ಪಡೆಯುವ ಮೂಲಕ ಶೇ 100% ಫಲಿತಾಂಶದೊಂದಿಗೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿಯೇ ಗುಣಾತ್ಮಕ ಫಲಿತಾಂಶವನ್ನು ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 61 ವಿದ್ಯಾರ್ಥಿಗಳಲ್ಲಿ, ಅತ್ಯುನ್ನತ ಶ್ರೇಣಿ 10 (600 ಕ್ಕಿಂತ ಹೆಚ್ಚು ಅಂಕ), ಉನ್ನತ ಶ್ರೇಣಿ 24, ಉಳಿದ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕಲಶ್ 617/625 ಪಡೆಯುವ ಮೂಲಕ ರಾಜ್ಯಕ್ಕೆ 8 ನೇ ರ‌್ಯಾಂಕ್ ಪಡೆದು ಹೊರ ಹೊಮ್ಮಿರುತ್ತಾರೆ.
ರಾಜ್ಯ ಮಟ್ಟದ ರ‌್ಯಾಂಕ್ ಪಡೆಯುವುದರೊಂದಿಗೆ ಸಂಸ್ಥೆಗೆ ಶೇ 100 ಫಲಿತಾಂಶ ನೀಡುವುದರ ಮೂಲಕ ತಾಲ್ಲೂಕಿನ ಪ್ರೌಢಶಾಲೆಗಳಲ್ಲಿ ಗುಣಾತ್ಮಕ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದೆ.
ತೀರ್ಥಹಳ್ಳಿ ತಾಲ್ಲೂಕು ಹಾಗೂ ಶಿಕ್ಷಣ ಸಂಸ್ಥೆಗೆ ಮತ್ತು ಪೋಷಕರಿಗೆ ಕೀರ್ತಿ ತಂದಿರುವ ಈ ಸಾಧಕ ವಿದ್ಯಾರ್ಥಿಗಳನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆ ಅಧ್ಯಕ್ಷರು ಹಾಗೂ ನಿರ್ದೇಶಕರು, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಶಿಕ್ಷಕ ವೃಂದ ಮತ್ತು ಭೋಧಕೇತರ ವೃಂದದವರು ಹಾರ್ದಿಕವಾಗಿ ಅಭಿನಂದಿಸಿ ಶುಭ ಹಾರೈಸಿರುತ್ತಾರೆ.
