ಬೆಜ್ಜವಳ್ಳಿ ಬಳಿ ಭೀಕರ ಅಪಘಾತ- ಓರ್ವನ ಸ್ಥಿತಿ ಗಂಭೀರ..! Bejjavalli

 ಬೆಜ್ಜವಳ್ಳಿ ಬಳಿ ಭೀಕರ ಅಪಘಾತ- ಓರ್ವನ ಸ್ಥಿತಿ ಗಂಭೀರ..!






ತೀರ್ಥಹಳ್ಳಿ: ಮಂಗಳವಾರ ರಾತ್ರಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಿಂದ ಸಮಕಾನಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಹಾಗೂ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಬೈಕ್ ಸವಾರನ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು ಕಾಲು ಕಟ್ ಆಗಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ತಕ್ಷಣವೇ ಅವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.








Previous Post Next Post