ಬೆಂಗಳೂರಲ್ಲಿ ಆರ್ಸಿಬಿ ಮುಂದಿನ ಮ್ಯಾಚ್ ರದ್ದು.. ಮುಂದಿನ ಕಥೆ ಏನು???
ಮೇ 23 ರಂದು ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಹೈ-ವೋಲ್ಟೇಜ್ ಪಂದ್ಯ ನಡೆಯಲಿದೆ. ನಿಗದಿಯಂತೆ ಈ ಪಂದ್ಯವು ಬೆಂಗಳೂರಲ್ಲಿ ನಡೆಯಬೇಕಿತ್ತು. ಆದರೆ ಬೆಂಗಳೂರಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಲಕ್ನೋಗೆ ಶಿಫ್ಟ್ ಮಾಡಲಾಗಿದೆ.
ಹವಾಮಾನ ಇಲಾಖೆ ಮಳೆ ಸುರಿಯುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಲಕ್ನೋದ ಎಕನಾ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮೇ 17 ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಕೋಲ್ಕತ್ತ ವಿರುದ್ಧ ಪಂದ್ಯವಿತ್ತು. ಆದರೆ ಮಳೆಯಿಂದಾಗಿ ನಡೆಸಲು ಸಾಧ್ಯವಾಗಲಿಲ್ಲ. ಪಂದ್ಯ ಕ್ಯಾನ್ಸಲ್ ಆದ ಹಿನ್ನೆಲೆಯಲ್ಲಿ ಎರಡೂ ತಂಡಗಳು ತಲಾ ಒಂದೊಂದು ಪಾಯಿಂಟ್ಸ್ ಹಂಚಿಕೊಂಡವು.
ಈ ರೀತಿ ಮತ್ತೆ ಆಗಬಾರದು ಅನ್ನೋ ಉದ್ದೇಶದಿಂದ ಬೆಂಗಳೂರಿನ ಪಂದ್ಯವನ್ನು ಲಕ್ನೋಗೆ ಶಿಫ್ಟ್ ಮಾಡಲಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ಜೊತೆ ಬೆಂಗಳೂರು ತಂಡ ಮೇ 27 ರಂದು ಪಂದ್ಯ ಆಡಲಿದೆ. ಇನ್ನು, ಐಪಿಎಲ್ ಅಂತಿಮಘಟ್ಟ ತಲುಪಿದ್ದು, ಮೇ 29 ರಿಂದ ಪ್ಲೇ-ಆಫ್ ಪಂದ್ಯಗಳು ನಡೆಯಲಿವೆ. ಜೂನ್ 3 ರಂದು ಫೈನಲ್ ಮ್ಯಾಚ್ ನಡೆಯಲಿದೆ.
Tags:
ಕ್ರೀಡಾ ಸುದ್ದಿ