ನಾಳೆಯೇ SSLC ಫಲಿತಾಂಶ.. ಎಷ್ಟು ಗಂಟೆಗೆ? ರಿಸಲ್ಟ್‌ ನೋಡೋದು ಹೇಗೆ? ಕಂಪ್ಲೀಟ್‌ ಮಾಹಿತಿ ಇಲ್ಲಿದೆ! SSLC RESULT

 ನಾಳೆಯೇ SSLC ಫಲಿತಾಂಶ.. ಎಷ್ಟು ಗಂಟೆಗೆ? ರಿಸಲ್ಟ್‌ ನೋಡೋದು ಹೇಗೆ? ಕಂಪ್ಲೀಟ್‌ ಮಾಹಿತಿ ಇಲ್ಲಿದೆ!







SSLC ಪರೀಕ್ಷೆ ಅನ್ನೋದು ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು. ರಾಜ್ಯದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು, ಪೋಷಕರು ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ನಾಳೆ ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ.

ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ SSLC ಪರೀಕ್ಷೆ ನಡೆದಿತ್ತು. ರಾಜ್ಯದ ಎಲ್ಲೆಡೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ, ನಾಳೆ SSLC ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ.


2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.

ನಾಳೆ ಬೆಳಗ್ಗೆ 11-30 ಗಂಟೆಗೆ ಶಿಕ್ಷಣ ಸಚಿವರು SSLC ಫಲಿತಾಂಶವನ್ನು ಪ್ರಕಟ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12-30 ಗಂಟೆಯ ನಂತರ SSLC ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.





Previous Post Next Post