ನಾಳೆ ತೀರ್ಥಹಳ್ಳಿಗೆ ಚಕ್ರವರ್ತಿ ಸೂಲಿಬೆಲೆ ಆಗಮನ TTH

ನಾಳೆ ತೀರ್ಥಹಳ್ಳಿಗೆ ಚಕ್ರವರ್ತಿ ಸೂಲಿಬೆಲೆ ಆಗಮನ 
ತೀರ್ಥಹಳ್ಳಿ : ಭಾರತ ಪಾಕಿಸ್ತಾನ ನಡುವೆ ನಡೆದ ಯುದ್ಧಕ್ಕೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿತ್ತು. ಪಾಕಿಸ್ತಾನದ ಉಗ್ರರನ್ನು ಸಂಹಾರ ಮಾಡಿದ ಭಾರತೀಯ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ತೀರ್ಥಹಳ್ಳಿಯಲ್ಲಿ ನಾಳೆ ವಿಜಯ ಸಿಂಧೂರ ಕಾರ್ಯಕ್ರಮ ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದಿಂದ ಕುಶಾವತಿಯ ಪಾರ್ಕ್ ವರೆಗೆ ಶೋಭಯಾತ್ರೆ ನಡೆಯಲಿದೆ. ಕುಶಾವತಿ ಪಾರ್ಕ್ ನಲ್ಲಿ ಸಭಾಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುವ ಸಲುವಾಗಿ ಚಕ್ರವರ್ತಿ ಸೂಲಿಬೆಲೆ ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ.

ಕಾರ್ಯಕ್ರಮದ ನೇತೃತ್ವವನ್ನು ಶಾಸಕ ಆರಗ ಜ್ಞಾನೇಂದ್ರ ವಹಿಸಲಿದ್ದು ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಹೆಮ್ಮೆಯ ಭಾರತೀಯ ಯೋಧರಿಗೆ ಗೌರವ ನೀಡುವ ವಿಶೇಷ ಕಾರ್ಯಕ್ರಮ ತೀರ್ಥಹಳ್ಳಿಯಲ್ಲಿ ನಾಳೆ ನಡೆಯಲಿದ್ದು ಪ್ರತಿಯೊಬ್ಬರು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯೋಜಕರು ತಿಳಿಸಿದ್ದಾರೆ.




Previous Post Next Post