ಬಿಗ್ ಶಾಕ್ ಕೊಟ್ಟ ವಿರಾಟ್ ಕೊಹ್ಲಿ; ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ virat kohli

 ಬಿಗ್ ಶಾಕ್ ಕೊಟ್ಟ ವಿರಾಟ್ ಕೊಹ್ಲಿ; ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ



ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಳಿಕ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ T20 ಕ್ರಿಕೆಟ್​ಗೆ ಕೊಹ್ಲಿ ಗುಡ್‌ ಬೈ ಹೇಳಿದ್ದು, ಸದ್ಯ ಅಂತಾರಾಷ್ಟ್ರೀಯ ಏಕದಿನ ಪಂದ್ಯಾವಳಿ ಮಾತ್ರ ಆಡಲಿದ್ದಾರೆ.


ವಿರಾಟ್ ಕೊಹ್ಲಿ ಅವರು 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್​ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. 14 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.


2025 ಐಪಿಎಲ್ ಮುಗಿದ ಬಳಿಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಭಾರತ ತಂಡ ರೆಡಿಯಾಗುತ್ತಿದೆ. ಇಂಗ್ಲೆಂಡ್‌ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ಘೋಷಿಸದಂತೆ ಹಲವು ಕ್ರಿಕೆಟ್ ದಿಗ್ಗಜರು ಮನವಿ ಮಾಡಿದ್ದರು.

 ತಂಡಕ್ಕೆ ಬಂತು ಆನೆಬಲ 


ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಬಯಸಿದ್ದ ವಿರಾಟ್ ಕೊಹ್ಲಿ ಅವರು ತಮ್ಮ ನಿರ್ಧಾರಕ್ಕೆ ಬದ್ಧರಾಗಿ ಇಂದು ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಳಿಕ ಕೊಹ್ಲಿಯಿಂದಲೂ ನಿವೃತ್ತಿ ಘೋಷಿಸಿರೋದು ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ತಂದಿದೆ

Previous Post Next Post