ಆರಿದ್ರಾ ಮಳೆಯ ಅಬ್ಬರ - ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ
ತೀರ್ಥಹಳ್ಳಿ: ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ.
ಕಳೆದ 24 ಗಂಟೆಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿದ್ದು ಮಳೆಯ ಜೊತೆಗೆ ಶೀತ ಗಾಳಿ ಸಹ ಬೀಸುತ್ತಿದೆ. ಇದರಿಂದ ಮಕ್ಕಳಿಗೆ ಆರೋಗ್ಯದಲ್ಲಿ ತೊಂದರೆಯಾಗುವ ಮುನ್ಸೂಚನೆಯಿಂದ ಇಂದು ( 26-6-2025 ರ ಗುರುವಾರ) ರಜೆ ಘೋಷಿಸಲಾಗಿದೆ.
ಈಗ ನೀಡಿರುವ ರಜೆಯನ್ನು ಮುಂದಿನ ಶನಿವಾರದಂದು
ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ.
Tags:
ಮಳೆ