ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಸಹ ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ Rain

ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಸಹ ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ
ತೀರ್ಥಹಳ್ಳಿ: ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ  ಮುಂಜಾಗೃತಾ ಕ್ರಮವಾಗಿ  ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ಇಂದು 27-62025 ರ ಶುಕ್ರವಾರ ರಜೆಯನ್ನು ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ.


ತಾಲೂಕಿನಲ್ಲಿ ಮಳೆಯಾಗುತ್ತಿರುವ ಜೊತೆಗೆ  ಶೀತ ಗಾಳಿ ಸಹ ಬೀಸುತ್ತಿದೆ. ಅಷ್ಟೇ ಅಲ್ಲದೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ಮಕ್ಕಳಿಗೆ ತೊಂದರೆಯಾಗುವ ಮುನ್ಸೂಚನೆಯಿಂದ ಇಂದು ( 27-6-2025 ರ ಶುಕ್ರವಾರ)  ರಜೆ ಘೋಷಿಸಲಾಗಿದೆ.

ಈಗ ನೀಡಿರುವ ರಜೆಯನ್ನು ಮುಂದಿನ ದಿನಗಳಲ್ಲಿ
ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ.
Previous Post Next Post