ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಆರ್​ಸಿಬಿ RCB

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಆರ್​ಸಿಬಿ 
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಆರ್​ಸಿಬಿ ಫ್ರಾಂಚೈಸಿ ಇಂದು ಪರಿಹಾರ ಘೋಷಣೆ ಮಾಡಿದೆ.

ಮಂಗಳವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿದ ಆರ್​ಸಿಬಿ 17 ವರ್ಷಗಳ ಬಳಿಕ ಟ್ರೋಫಿ ಗೆದ್ದಿತ್ತು. ಮರುದಿನ, ಬುಧವಾರ ಬೆಂಗಳೂರಿನಲ್ಲಿ ಟ್ರೋಫಿಯೊಂದಿಗೆ ವಿಜಯೋತ್ಸವ ಮೆರವಣೆಗೆ ಮಾಡುವುದಾಗಿ ಘೋಷಿಸಲಾಗಿತ್ತು.


ಆದರೆ, ಮೆರವಣಿಗೆಯಿಂದಾಗಿ ಟ್ರಾಫಿಕ್​ ಮತ್ತು ಭದ್ರತಾ ಸಮಸ್ಯೆ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಅವಕಾಶ ನೀಡಿರಲಿಲ್ಲ. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿ​ಗಳೊಂದಿಗೆ ಸಂಭ್ರಮಾಚರಿಸಲು ನಿರ್ಧರಿಸಲಾಗಿತ್ತು.

ಇದರ ಬೆನ್ನಲ್ಲೇ ಲಕ್ಷಾಂತರ ಜನರು ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಮೈದಾನದ ಬಳಿ ಜಮಾಯಿಸಿದ್ದರು. ನಂತರ ಕಾಲ್ತುಳಿತ ನಡೆದು 11 ಜನ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಆರ್​ಸಿಬಿ ಫ್ರಾಂಚೈಸಿ ಮೃತರ ಕಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದೆ.
Previous Post Next Post