ನೇ*ಣು ಬಿಗಿದ ಸ್ಥಿತಿಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೃತದೇಹ ಪತ್ತೆ
ಶಿವಮೊಗ್ಗ: ಹಾಸ್ಟೆಲ್‌ನ ಕೊಠಡಿಯಲ್ಲಿ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಷ್ಣು ಪ್ರಿಯಾ (22) ಮೃತಳು.
ಬೆಂಗಳೂರು ಮೂಲದ ವಿಷ್ಣು ಪ್ರಿಯಾ ಶಿವಮೊಗ್ಗದ ಸುಬ್ಬಯ್ಯ ಕಾಲೇಜಿನಲ್ಲಿ ಮೆಡಿಕಲ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇವತ್ತು ಹಾಸ್ಟೆಲ್‌ನ ಕೊಠಡಿಯಲ್ಲಿ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷ್ಣು ಪ್ರಿಯಾ ವೈದ್ಯಕೀಯ ಪದವಿ ಪೂರ್ಣಗೊಳಿಸಿ ಇಂಟರ್ನ್‌ಶಿಪ್‌ನಲ್ಲಿದ್ದರು ಎಂದು ತಿಳಿದು ಬಂದಿದೆ. ವಿಷ್ಣು ಪ್ರಿಯಾಳ ಪೋಷಕರು ವಿದೇಶದಲ್ಲಿದ್ದಾರೆ. ಈ ಹಿನ್ನೆಲೆ ಆಕೆಯ ಸಂಬಂಧಿಕರಿಗೆ ಮಾಹಿತಿ ತಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Tags:
ಆತ್ಮಹತ್ಯೆ ಸುದ್ದಿ