ಆರ್ ಸಿ ಬಿ ಗೆಲುವಿನ ಸಂಭ್ರಮ- ಯುವಕನೋರ್ವ ಸಾವು..!. shivamogga

ಆರ್ ಸಿ ಬಿ ಗೆಲುವಿನ ಸಂಭ್ರಮ- ಯುವಕನೋರ್ವ ಸಾವು..!
ಶಿವಮೊಗ್ಗ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದ ಶಿವಮೊಗ್ಗದ ಯುವಕನೋರ್ವ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಉಷಾ ನರ್ಸಿಂಗ್ ಹೋಮ್ ಸರ್ಕಲ್ ಬಳಿ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ.

ಮೃತ ಯುವಕ ವೆಂಕಟೇಶ್ ನಗರದ ನಿವಾಸಿ ಅಭಿ (21 ವರ್ಷ) ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕರು ಬೈಕ್ ಜಾಥಾ ನಡೆಸಿದರು.ಈ ಸಂದರ್ಭ ಎರಡು ಬೈಕ್ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಅಭಿ ಸಾವನ್ನಪ್ಪಿದ್ದಾನೆ.
Previous Post Next Post