ಬೊಮ್ಲಾಪುರದ ವಿದ್ಯಾರ್ಥಿನಿ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ನೇ*ಣಿಗೆ ಶರಣು
ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಕೊಪ್ಪ ಪಟ್ಟಣದಲ್ಲಿ ನಡೆದಿದೆ.
ಶಮಿತಾ (15) ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ. ಶನಿವಾರ ರಾತ್ರಿ ಶಮಿತಾ ಆ*ತ್ಮಹ*ತ್ಯೆ ಮಾಡಿಕೊಂಡಿದ್ದು, ಇಂದು ಬೆಳಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.
ಕೊಪ್ಪ ಹಾಗೂ ತೀರ್ಥಹಳ್ಳಿ ಮಧ್ಯದಲ್ಲಿರುವ ಬೊಮ್ಲಾಪುರ ಗ್ರಾಮದ ವಿದ್ಯಾರ್ಥಿನಿ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ಓದುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tags:
ಆತ್ಮಹತ್ಯೆ ಸುದ್ದಿ