ತೀರ್ಥಹಳ್ಳಿ ಹಾಗೂ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ..!Transfer

ತೀರ್ಥಹಳ್ಳಿ ಹಾಗೂ ಆಗುಂಬೆ ಪೊಲೀಸ್ ಠಾಣೆಯ 
ಸಬ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ..!

ತೀರ್ಥಹಳ್ಳಿ : ತಾಲೂಕಿನ ಇಬ್ಬರು ಸಬ್
ಇನ್ಸ್‌ಪೆಕ್ಟರ್‌ಗಳನ್ನು ( ಪಿಎಸ್ಐ ) ವರ್ಗಾವಣೆಗೊಳಿಸಿ
ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಬಿ ಆರ್ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸಿ ಜನರ ಪ್ರೀತಿ ಗಳಿಸಿದ್ದ ಶಿವನ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ
ತೀರ್ಥಹಳ್ಳಿ ಜನರಿಗೆ ಶುಭ ಸುದ್ದಿ ಏನೆಂದರೆ ವರ್ಗಾವಣೆ ಆದರೂ ತೀರ್ಥಹಳ್ಳಿ ತಾಲೂಕಿನಲ್ಲೇ ಶಿವನಗೌಡ ಕಾರ್ಯನಿರ್ವಹಿಸಲಿದ್ದಾರೆ. 

ಹೌದು ತೀರ್ಥಹಳ್ಳಿಯಿಂದ ವರ್ಗಾವಣೆಗೊಂಡಿರುವ ಪಿಎಸ್ಐ ಶಿವನಗೌಡ ತಾಲೂಕಿನ ಆಗುಂಬೆ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದಾರೆ. ಒಟ್ಟಿನಲ್ಲಿ ತೀರ್ಥಹಳ್ಳಿ ತಾಲೂಕಿನಲ್ಲಿಯೇ ಕಾರ್ಯ ನಿರ್ವಹಿಸಲಿದ್ದಾರೆ ಎಂಬುದೇ
ಶುಭ ಸುದ್ದಿಯಾಗಿದೆ.

ಇನ್ನು ಆಗುಂಬೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ರಂಗನಾಥ್ ಅಂತರಗಟ್ಟಿಯವರನ್ನು ಹಾವೇರಿ
ಜಿಲ್ಲೆಯ ಸವಣೂರು ಠಾಣೆಗೆ ವರ್ಗಾಯಿಸಲಾಗಿದೆ. ಇಬ್ಬರು ಅಧಿಕಾರಿಗಳು ಸಹ ಎರಡು ವರ್ಷಗಳ ತಮ್ಮ ಕರ್ತವ್ಯದ ಸಮಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ
ಅಪರಾಧ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.






Previous Post Next Post