ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು -ಪಿಎಸ್ಐ ಸುಷ್ಮಾ Tth

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು -ಪಿಎಸ್ಐ ಸುಷ್ಮಾ
    
ತೀರ್ಥಹಳ್ಳಿ : ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಪಿಎಸ್ಐ ಸುಷ್ಮಾ ಹೇಳಿದರು

ಇಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಹಲವೆಡೆ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.


ಪ್ರತಿವರ್ಷ ಜೂನ್ 26ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.
ಇಂದಿನ ಯುವಕರು ತಂದೆ, ತಾಯಿ ಹಾಗೂ ಗುರುಗಳ ಋಣ ಎಂದಿಗೂ ಮರೆಯಬಾರದು. ಸದ್ಗುಣ ಸಚ್ಚಾರಿತ್ರ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಬೇಕು. ಮಾದಕ ವಸ್ತುಗಳು ನಮ್ಮ ವ್ಯಕ್ತಿತ್ವಕ್ಕೆ ಹಾಗೂ ಆರೋಗ್ಯಕ್ಕೆ ಮಾರಕವಾಗಿವೆ. ಇನ್ನು ಮೊಬೈಲ್ ಎಷ್ಟು ಪ್ರಯೋಜನವಾಗಿದೆ ಅಷ್ಟೇ ದುಷ್ಪರಿಣಾಮವಿದೆ. ವಿದ್ಯಾರ್ಥಿಗಳಾದ ನೀವು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಇನ್ನು ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು.


Previous Post Next Post