ವಾಗ್ದೇವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆ..! Vagdevi Collage

ವಾಗ್ದೇವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರ  ಮಟ್ಟಕ್ಕೆ  ಆಯ್ಕೆ..!


ತೀರ್ಥಹಳ್ಳಿ : ಪರೀಕ್ಷೆಯಲ್ಲಿ ರಾಜ್ಯಕ್ಕೆ ರ‌್ಯಾಂಕ್ ಪಡೆದಿದ್ದ ವಾಗ್ದೇವಿ ಶಾಲೆಯ ವಿದ್ಯಾರ್ಥಿಗಳು ಈಗ ಪಾಠದಲ್ಲಿ ಅಷ್ಟೇ ಅಲ್ಲ ಆಟದಲ್ಲೂ ನಾವು ಮುಂದೆ ಎಂದು ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು ತೋರಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ .

ಹೌದು 14 /06 /2025 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬ್ಬಡಿ ಅಸೋಸಿಯೇಷನ್ ಆಯೋಜಿಸಿದ ರಾಜ್ಯ ಮಟ್ಟದ ಕಬಡ್ಡಿ ಪ್ರಕ್ರಿಯೆಯಲ್ಲಿ ವಾಗ್ದೇವಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಅಮೂಲ್ಯ ಕೆ.ಪಿ ಹಾಗೂ ಶ್ರಾವ್ಯ ಹೆಚ್ ಓ ಇವರು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ರಾಜ್ಯವನ್ನ ಪ್ರತಿನಿಧಿಸುತ್ತಿದ್ದಾರೆ. ರಾಷ್ಟ್ರಮಟ್ಟದ ಕ್ರೀಡಾಕೂಟವು ಜೂನ್ 28 ರಿಂದ ಜುಲೈ 1 ರವರೆಗೆ ಉತ್ತರಖಂಡದ ಹರಿದ್ವಾರದಲ್ಲಿ ನಡೆಯಲಿದೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಹಾಗೂ ಉಪನ್ಯಾಸಕರು ಶುಭಕೋರಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದ್ದಾರೆ.

Previous Post Next Post