ಗುಣಾತ್ಮಕ ಶಿಕ್ಷಣದೊಂದಿಗೆ ಸತತ ಶೇಕಡ 100% ಫಲಿತಾಂಶ ಪಡೆದ ಸಹ್ಯಾದ್ರಿ ಪಿ.ಯು ಕಾಲೇಜಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗೌರವ ಸಮರ್ಪಣೆ Sahyadri Collage

ಗುಣಾತ್ಮಕ ಶಿಕ್ಷಣದೊಂದಿಗೆ ಸತತ ಶೇಕಡ 100% ಫಲಿತಾಂಶ ಪಡೆದ ಸಹ್ಯಾದ್ರಿ ಪಿ.ಯು ಕಾಲೇಜಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗೌರವ ಸಮರ್ಪಣೆ

ತೀರ್ಥಹಳ್ಳಿ : ದಿನಾಂಕ: 8/07/2025ರಂದು ಶಿವಮೊಗ್ಗದ ಉಪನಿರ್ದೇಶಕರ ಕಛೇರಿಯ ಸಭಾಂಗಣದಲ್ಲಿ
ನಡೆದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಭೆಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಿದ ಶೇಕಡಾ 100% ಫಲಿತಾಂಶ ಪಡೆದ ಪದವಿ ಪೂರ್ವ ಕಾಲೇಜುಗಳ ಅಭಿನಂದನಾ ಕಾರ್ಯಕ್ರಮದಲ್ಲಿ 2023 ಮತ್ತು 2024 ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆಯಲ್ಲಿ ಸತತವಾಗಿ ಶೇ.100% ರ ಫಲಿತಾಂಶ ಪಡೆಯುವ ಮೂಲಕ ಗುಣಾತ್ಮಕ ಫಲಿತಾಂಶದೊಂದಿಗೆ ಜಿಲ್ಲೆಯಲ್ಲೇ ಅತ್ಯುತ್ತಮ ಸಾಧನೆ ಮಾಡಿದ ಪಿ.ಯು ಕಾಲೇಜು ಎಂಬ ಹೆಗ್ಗಳಿಕೆಗೆ ಮಾನ್ಯವಾಗಿರುವುದರಿಂದ ಈ
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿ
ಗೌರವಿಸಲಾಯಿತು.

ಕಾಲೇಜಿನ ಪರವಾಗಿ ಸಂಸ್ಥೆಯ ಪ್ರಾಂಶುಪಾಲರಾದ  ಗುರುರಾಜ್ ಹೆಚ್ ಬಿ ಇವರಿಗೆ ಜಿಲ್ಲಾ
ಉಪನಿರ್ದೇಶಕರಾದ ಚಂದ್ರಪ್ಪ ಎಸ್ ಗುಂಡುವ ಇವರು ಅಭಿನಂದಿಸಿ ಗೌರವಿಸಿದರು.



Previous Post Next Post