ಶೇ 100% ಪಡೆದ ವಾಗ್ದೇವಿ ಶಿಕ್ಷಣ ಸಂಸ್ಥೆಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗೌರವ ಅಭಿನಂದನೆ Vagdevi Collage

ಶೇ 100% ಪಡೆದ ವಾಗ್ದೇವಿ ಶಿಕ್ಷಣ ಸಂಸ್ಥೆಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗೌರವ ಅಭಿನಂದನೆ 


ತೀರ್ಥಹಳ್ಳಿ : ಆಟ - ಪಾಠ ಈ ಎರಡು ವಿಚಾರದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆ ಯಾವಾಗಲು ಒಂದು ಕೈ ಮುಂದೆ ಎಂದರೆ ತಪ್ಪಾಗುವುದಿಲ್ಲ. ಅದರಂತೆ ಈ ಬಾರಿ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶೇ 100% ಫಲಿತಾಂಶ ಪಡೆದ ಕಾರಣಕ್ಕೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗೌರವಿಸಿ ಅಭಿನಂದನೆ ಸಲ್ಲಿಸಲಾಯಿತು. 

ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಬೆಂಗಳೂರು ಇವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2024 ರ ಮಾರ್ಚ್ - ಏಪ್ರಿಲ್ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ  ಶೇ 100%  ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದೆ. ಇದಕ್ಕಾಗಿ ಶಾಲೆಗೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗಿದೆ.

ವಾಗ್ದೇವಿ ಶಿಕ್ಷಣ ಸಂಸ್ಥೆಯ ಕಾಲೇಜು ಪ್ರಾಂಶುಪಾಲರಾದ ಮಮತಾ ಅವರು ಕಾಲೇಜಿನ ಪರವಾಗಿ ಗೌರವವನ್ನು ಸ್ವೀಕರಿಸಿದರು..



Previous Post Next Post