ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ ವರ್ಗಾವಣೆ..!
ಶಿವಮೊಗ್ಗ : ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ-1 ಆಗಿದ್ದ ಅನಿಲ್ ಕುಮಾರ್ ಭೂಮರೆಡ್ಡಿ ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ಯಾರು ಎಂಬುದು ಇನ್ನೂ ನಿಗದಿಯಾಗಿಲ್ಲ.
1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಉಪ-ಪರೀಕ್ಷಕರಾಗಿ ಸೇವೆ ಆರಂಭಿಸಿದ ಅವರು ಪಿಎಸ್‌ಐ, ಸರ್ಕಲ್ ಇನ್‌ಸ್ಪೆಕ್ಟರ್ ಮತ್ತು ಪೊಲೀಸ್ ಉಪಾಧೀಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.
ಅನಿಲ್ ಕುಮಾರ್ ಅವರು ಗಣರಾಜ್ಯೋತ್ಸವದಂದು ಪ್ರತಿಭಾನ್ವಿತ ಸೇವೆಗಾಗಿ ರಾಷ್ಟ್ರಪತಿಗಳ ಪದಕಕ್ಕೆ ಆಯ್ಕೆಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ರಕ್ಷಣಾಧಿಕಾರಿ-1 ಹುದ್ದೆಗೆ ವರ್ಗವಾಗಿದ್ದಾರೆ.
Tags:
ಶಿವಮೊಗ್ಗ ಸುದ್ದಿ