ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ Christ king

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಬಡಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಿರಂತರ ಒಂದಲ್ಲಾ ಒಂದು ಬಹುಪಯೋಗಿ ಶೈಕ್ಷಣಿಕ ಯೋಜನೆಗಳನ್ನು ಜಾರಿಗೊಳಿಸುತ್ತಾ ಬರುತ್ತಿದೆ. 

ಅತೀ ಕಡಿಮೆ ಶುಲ್ಕದೊಂದಿಗೆ ಅತ್ಯುತ್ತಮ ಶಿಕ್ಷಣ ನೀಡುವ ಈ ಸಂಸ್ಥೆ  ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿನ ಆಶಾಕಿರಣವಾಗಿ ಬೆಳೆದು ನಿಂತಿದೆ. ಈಗ ಮತ್ತೊಂದು ವಿದ್ಯಾರ್ಥಿ ಸ್ನೇಹಿ ಯೋಜನೆಗೆ ಚಾಲನೆ ನೀಡಿದ್ದು ಪ್ರಸಕ್ತ ವರ್ಷದಿಂದ ವಿದ್ಯಾರ್ಥಿಗಳಿಗೆ ಉಚಿತ ಲಾಂಗ್ ಟರ್ಮ್ ನೀಟ್ ತರಬೇತಿಯನ್ನು ಆರಂಭಿಸುತ್ತಿದೆ. 

ಯಾವೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಯೂ ಆರ್ಥಿಕ ಸಮಸ್ಯೆಯಿಂದಾಗಿ ನೀಟ್ ತರಬೇತಿಯಿಂದ ವಂಚಿತಾರಾಗಬಾರದು ಎಂಬುದು ಇದರ ಉದ್ದೇಶವಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ (ಪಿಸಿಎಂಬಿ) ಮುಗಿಸಿ ವೈದ್ಯರಾಗಬೇಕೆಂದು ಕನಸು ಕಾಣುತ್ತಿರುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಅಪೂರ್ವ ಅವಕಾಶ ಸಿಗಲಿದೆ. 

ನೀಟ್ ತರಬೇತಿಗೆ ಸೇರಬಯಸುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಸೌಲಭ್ಯ ಲಭ್ಯವಿದ್ದು ಆಸಕ್ತರು ಈ ಕೂಡಲೇ ದೂರವಾಣಿ ಸಂಖ್ಯೆ 7022274843 ಅಥವಾ ಸಂಸ್ಥೆಯನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. 


Previous Post Next Post