ತುದೂರು ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭ..!
ತೀರ್ಥಹಳ್ಳಿ : ತೂದೂರು ಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭದ ಉದ್ಘಾಟನಾ ಸಮಾರಂಭವನ್ನು ಹಮ್ಭಿಕೊಳ್ಳಲಾಗಿತ್ತು. ಇಲ್ಲಿಯವರೆಗೆ ಕನ್ನಡ ಮಾಧ್ಯಮ ಶಾಲೆಯಾಗಿದ್ದ ಶಾಲೆ ಈಗ ಆಂಗ್ಲ ಮಾಧ್ಯಮ ಸೇರ್ಪಡೆ ಆಗಿದೆ.
ಈ ಕಾರ್ಯಕ್ರಮದಲ್ಲಿ ತೂದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಶಿಕಲಾ ದೇವರಾಜ್, ನಿಕಟಪೂರ್ವ ಅಧ್ಯಕ್ಷರಾದ ಮಧುರಾಜ್ ಹೆಗಡೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಚಂದ್ರಶೇಖರ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜಲಿಲ್, ಪ್ರೌಢಶಾಲಾ ಎಸ್.ಡಿ.ಎಂ.ಸಿ ನಿಕಟಪೂರ್ವಾಧ್ಯಕ್ಷರಾದ ಕವಿರಾಜ್, ಪ್ರೌಢಶಾಲಾ ಪ್ರಭಾರಿ ಮುಖ್ಯ ಶಿಕ್ಷಕ ರಾಘವೇಂದ್ರ, ಪ್ರಾಥಮಿಕ ವಿಭಾಗದ ಹಿರಿಯ ಶಿಕ್ಷಕರಾದ ಶೋಭಾ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಎಲ್ಲಾ ಶಿಕ್ಷಕರು ಹಾಜರಿದ್ದರು.
Tags:
ತೀರ್ಥಹಳ್ಳಿ ಸುದ್ದಿ