ಹೊಸನಗರ ತಾಲೂಕಿನ ಅಂಗನವಾಡಿ ಶಾಲೆಗಳಿಗೆ ನಾಳೆ ರಜೆ ಘೋಷಣೆ Hosanagara

ಹೊಸನಗರ ತಾಲೂಕಿನ ಅಂಗನವಾಡಿ ಶಾಲೆಗಳಿಗೆ ನಾಳೆ ರಜೆ ಘೋಷಣೆ
ಹೊಸನಗರ: ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ  ಮುಂಜಾಗೃತಾ ಕ್ರಮವಾಗಿ  ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸಿ 25-7-25 ರಂದು ರಜೆಯನ್ನು ಘೋಷಿಸಿ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.


ಇಂದು ಬಾರಿ ಮಳೆಯಾಗುತ್ತಿದ್ದು ನಾಳೆ ಸಹ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮಕ್ಕಳಿಗೆ ತೊಂದರೆಯಾಗುವ ಮುನ್ಸೂಚನೆಯಿಂದ ರಜೆ ಘೋಷಿಸಲಾಗಿದೆ. ಈಗ ನೀಡಿರುವ ರಜೆಯನ್ನು ಮುಂದಿನ ಶನಿವಾರದಂದು ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ.

ಸಾಗರ ಶಾಲೆಗಳಿಗೆ ರಜೆ 

ಈಗಾಗಲೇ ಸಾಗರ ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.





Previous Post Next Post