ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾಮಗಾರಿಯಲ್ಲಿ ಗುತ್ತಿಗೆದಾರರಿಂದ ವಿಳಂಬ..!
ಗುತ್ತಿಗೆದಾರರ ಮೇಲೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪಟ್ಟಣ ಪಂಚಾಯತ್ ಅಧ್ಯಕ್ಷರ ಮನವಿ
ತೀರ್ಥಹಳ್ಳಿ: ಸಂಬಂಧಿಸಿದಂತೆ ಮಾನ್ಯ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ಇಂದಿರಾ ಕ್ಯಾಂಟಿನನ್ನು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮುಖ್ಯ ರಸ್ತೆಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಕಛೇರಿ ಆವರಣದಲ್ಲಿ ನಿರ್ಮಿಸುತ್ತಿದ್ದು, ಸದರಿ ಕಟ್ಟಡ ಕಾಮಗಾರಿಯನ್ನು ನಿರ್ವಹಿಸುವಲ್ಲಿ ಗುತ್ತಿಗೆದಾರರು ವಿಳಂಬ ನೀತಿ ಅನುಸರಿಸುತ್ತಿದ್ದು,
ಇದರಿಂದ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲು ತುಂಬಾ ವಿಳಂಬವಾಗಿರುತ್ತದೆ.
ಇಂದಿರಾ ಕ್ಯಾಂಟೀನ್ ನಿರ್ಮಾಣವಾದಲ್ಲಿ ಸಾರ್ವಜನಿಕರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಬಡಜನರಿಗೆ ತುಂಬಾ ಅನುಕೂಲವಾಗುವುದರಿಂದ ತುರ್ತಾಗಿ ಇಂದಿರಾ ಕ್ಯಾಂಟೀನ್
ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ತಾವು ಗುತ್ತಿಗೆದಾರರಿಗೆ ನಿರ್ದೇಶನ ನೀಡಬೇಕಾಗಿ ಹಾಗೂ ಮಾನ್ಯ ಮುಖ್ಯಮಂತ್ರಿಗಳ ಮಹತ್ವಕಾಂಕ್ಷೆಯ ಯೋಜನೆಯಾದ
ಇಂದಿರಾ ಕ್ಯಾಂಟಿನನ್ನು ನಿರ್ಮಾಣ ಮಾಡಿ ಅನುಷ್ಠಾನಗೊಳಿಸಲು ಸಹಕರಿಸಬೇಕಾಗಿ ತಮ್ಮಲ್ಲಿ ಕೋರುತ್ತೇನೆ ಎಂಬುದಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಹಮತ್ ಉಲ್ಲಾ ಆಸಾದಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ..