ತೀರ್ಥಹಳ್ಳಿಗೆ ರೈಲ್ವೆ ಯೋಜನೆ ಹಾಗೂ ಕುವೆಂಪು ರಂಗಮಂದಿರಕ್ಕಾಗಿ ಸಂಸದರ ಬಳಿ ಪಟ್ಟಣ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರ ಮನವಿ
ತೀರ್ಥಹಳ್ಳಿ : ವೇಗವಾಗಿ ಬೆಳೆಯುತ್ತಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಶಿವಮೊಗ್ಗ ನೈರುತ್ಯ ರೈಲ್ವೆಯಿಂದ ತೀರ್ಥಹಳ್ಳಿ ಸಂಪರ್ಕ ಕಲ್ಪಿಸಿ ತೀರ್ಥಹಳ್ಳಿ ರೈಲ್ವೆ ಮಾರ್ಗಕ್ಕೆ
ಅರ್ಥಿಕವಾಗಿಯೂ ತೀರ್ಥಹಳ್ಳಿ ಬೆಳವಣಿಗೆಗೆ ಕಾರಣವಾಗಲಿದ್ದು, ಇದರಿಂದ ಸಾವಿರಾರು ಜನ
ಮಾರ್ಗಕ್ಕೆ ಅವಕಾಶ ಕಲ್ಪಿಸಿದರೆ ಇದರ ಸದುಪಯೋಗವನ್ನು ಪಡೆಯುವ ಜೊತೆಯಲ್ಲಿ ದಿನನಿತ್ಯದ ಸಂಚಾರಕ್ಕೆ ಅನುಕೂಲ
ಆಗಲಿದೆ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ಕೌನ್ಸಿಲ್ ವಿಶೇಷ ಸಾಮಾನ್ಯ ಸಭೆಯಲ್ಲಿ ತೀರ್ಥಹಳ್ಳಿ ಪಟ್ಟಣಕ್ಕೆ ಹೊಸ ರೈಲ್ವೆ ಮಾರ್ಗ ಕಲ್ಪಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ತೀರ್ಮಾನವನ್ನು ಕೈಗೊಂಡಿದ್ದು, ಈ ಬಗ್ಗೆ ಕೇಂದ್ರ ಬಗ್ಗೆ ಕೇಂದ್ರ ಸರ್ಕಾರದ ಸಂಸದರಾಗಿರುವ ತಾವು ತಮ್ಮ ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿಗೆ ರೈಲ್ವೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಪ್ರಭಾವಿ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ನಂಬಿರುತ್ತೇವೆ ಎಂದು ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಮನವಿ ಸಲ್ಲಿಸಿದ್ದಾರೆ.
ರಾಷ್ಟ್ರಕವಿ ಕುವೆಂಪುರವರ ಹೆಸರಿನಲ್ಲಿ ಕುವೆಂಪು ಬಯಲು ರಂಗಮಂದಿರ ನಿರ್ಮಾಣ
ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪುರವರ 120 ನೇ ಜನ್ಮದಿನೋತ್ಸವದ ಅಂಗವಾಗಿ ತೀರ್ಥಹಳ್ಳಿ ಪಟ್ಟಣದಲ್ಲಿ ರಾಷ್ಟ್ರಕವಿ ಕುವೆಂಪುರವರ ಹೆಸರಿನಲ್ಲಿ
ಕುವೆಂಪು ಬಯಲು ರಂಗಮಂದಿರ ನಿರ್ಮಾಣ ಮಾಡಲು ಕೌನ್ಸಿಲ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿರುತ್ತದೆ. ಹೊಸದಾಗಿ ನಿರ್ಮಾಣ ಮಾಡುವ ಕುವೆಂಪು ಬಯಲು ರಂಗಮಂದಿರಕ್ಕೆ 100.00 ಲಕ್ಷಗಳ ಅನುದಾನದ ಅವಶ್ಯಕತೆಯಿರುವುದರಿಂದ ಕುವೆಂಪು ಬಯಲು
ರಂಗಮಂದಿರ ನಿರ್ಮಾಣಕ್ಕಾಗಿ ತಮ್ಮ ಸಂಸದರ ನಿಧಿಯಿಂದ ಅನುದಾನವನ್ನು ನೀಡಬೇಕಾಗಿ ಈ ಮೂಲಕ ತಮ್ಮಲ್ಲಿ ಕೋರುತ್ತೇವೆ ಎಂದು ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಅವರನ್ನು
ಪ. ಪಂ ಅಧ್ಯಕ್ಷರಾದ ರಹಮತ್ ಉಲ್ಲಾ ಆಸಾದಿ ಹಾಗೂ ಇತರ ಸದಸ್ಯರು ಗೌರವ ಪೂರ್ವಕವಾಗಿ ಸನ್ಮಾನಿಸಿದರು.
Tags:
ಪಟ್ಟಣ ಪಂಚಾಯತ್