ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾದಿನಾಚರಣೆ -ಪ್ರತಿಭಾ ಪುರಸ್ಕಾರ- ಸಾಧಕ ಪತ್ರಕರ್ತರಿಗೆ ಸನ್ಮಾನ - ದಿನೇಶ್ ಅಮೀನ್ ಮಟ್ಟು ಅವರಿಂದ ದಿಕ್ಸೂಚಿ ಉಪನ್ಯಾಸ Press Function

ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾದಿನಾಚರಣೆ -ಪ್ರತಿಭಾ ಪುರಸ್ಕಾರ- ಸಾಧಕ ಪತ್ರಕರ್ತರಿಗೆ ಸನ್ಮಾನ - ದಿನೇಶ್ ಅಮೀನ್ ಮಟ್ಟು ಅವರಿಂದ ದಿಕ್ಸೂಚಿ ಉಪನ್ಯಾಸ
ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.26 ರಂದು ಪತ್ರಿಕಾ ದಿನಾಚರಣೆ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಾಧಕ ಪತ್ರಕರ್ತರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಸಂಘದ ಹಿರಿಯ ಉಪಾಧ್ಯಕ್ಷ ವೈದ್ಯನಾಥನ್ ಅವರು ಸುದ್ದಿಗೋಷ್ಟಿಯಲ್ಲಿಂದು ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯು ಪ್ರತಿವರ್ಷದಂತೆ ಈ ವರ್ಷವೂ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರವನ್ನು ಆಯೋಜಿಸಿದ್ದು ಜು 26 ರಂದು ಬೆಳಗ್ಗೆ 10.30ಕ್ಕೆ ಸರ್ಕಾರಿ ನೌಕರರ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭವನ್ನು ಸಂಸದ ಬಿ.ವೈ ರಾಘವೇಂದ್ರ ಅವರು ಉದ್ಘಾಟಿಸಲಿದ್ದಾರೆ.

ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ಅವರು ದಿಕ್ಸೂಚಿ ಉಪನ್ಯಾಸ ನೀಡಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಪತ್ರಕರ್ತರನ್ನು ಗೌರವಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿ, ಜಿಲ್ಲಾ ಗ್ಯಾರಂಟಿಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಸಿ.ಎಸ್ ಚಂದ್ರಭೂಪಾಲ್ , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕರಾದ ಎನ್. ರವಿಕುಮಾರ್ , ರಾಷ್ಟ್ರೀಯ ಮಂಡಳಿ ಸದಸ್ಯರಾದ ಬಂಡಿಗಡಿ ನಂಜುಂಡಪ್ಪ ಭಾಗವಹಿಸಲಿದ್ದು, ಜಿಲ್ಲಾ ಸಂಘದ ಅಧ್ಯಕ್ಷರಾದ ಕೆ ವಿ ಶಿವಕುಮಾರ್ ಅವರು ಅಧ್ಯಕ್ಷತೆ ವಹಿಸುವರು. ಎಂದು ವೈದ್ಯನಾಥನ್ ಅವರು ವಿವರಿಸಿದರು.

ಸರ್ವಸದಸ್ಯರ ಸಭೆ

ಇದೇ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್ ಅವರು ಪತ್ರಿಕಾದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದ ನಂತರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಶಾಖೆಯ ವಾರ್ಷಿಕ ಸರ್ವಸದಸ್ಯರ ಸಭೆಯು ಪತ್ರಿಕಾ ಭವನದಲ್ಲಿ ನಡೆಯಲಿದ್ದು, ಇದರ ಅಧ್ಯಕ್ಷತೆಯನ್ನು ಜಿಲ್ಲಾ ಸಂಘದ ಅಧ್ಯಕ್ಷರಾದ ಕೆ.ವಿ ಶಿವಕುಮಾರ್ ವಹಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೆ.ವಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ 2022-25 ನೇ ಸಾಲಿನ ಅನೇಕ ರಚನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳನ್ನು ಕೈಗೊಂಡಿದ್ದು, ಪತ್ರಕರ್ತ ಸದಸ್ಯರ ಕ್ಷೇಮಾಭಿವೃದ್ದಿಗೆ , ವೃತ್ತಿಪರ ಏಳಿಗೆಗೆ ಶ್ರಮವಹಿಸುತ್ತಾ ಬಂದಿದೆ. ಪತ್ರಕರ್ತರಿಗೆ ಆರೋಗ್ಯ ತಪಾಸಣಾಶಿಬಿರಗಳನ್ನು ನಡೆಸುವ ಮೂಲಕ ಪತ್ರಕರ್ತರು ಮತ್ತು ಅವರ ಕುಟುಂಬದ ಅರೋಗ್ಯ ಸಂರಕ್ಷಣೆಗೆ ಆದ್ಯತೆ ನೀಡುತ್ತಾ ಬರಲಾಯಿತು. ಕ್ರೀಡಾಕೂಟ, ವಿಚಾರಸಂಕಿರಣಗಳನ್ನು ನಡೆಸುವ ಮೂಲಕ ಪತ್ರಕರ್ತರ ದೈಹಿಕ ಕ್ಷಮತೆ, ಬೌದ್ಧಿಕ ಉನ್ನತೀಕರಣಕ್ಕೆ ಸಹಕರಿಸುತ್ತಾ ಬರಲಾಯಿತು ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ದಿಗೆ ಮತ್ತು ವೃತ್ತಿಪರತೆಗೆ ಒತ್ತು ನೀಡುವಲ್ಲಿ ಕೆ.ವಿ ಶಿವಕುಮಾರ್ ನೇತೃತ್ವದ ಕಾರ್ಯಕಾರಿಮಂಡಳಿ ಯು ಬದ್ದತೆಯಿಂದ ಕೆಲಸ ಮಾಡಿದ್ದು, ಪ್ರಜಾತಾಂತ್ರಿಕ ನಿಯಮಗಳಿಗನುಗುಣವಾಗಿ ಕಾಲ ಕಾಲಕ್ಕೆ ಅಡಳಿತ ಮಂಡಳಿ, ಸರ್ವಸದಸ್ಯರ ಸಭೆಗಳನ್ನು ನಡೆಸುವ ಮೂಲಕ ಸಂಘಟನಾತ್ಮಕ ನಿಯಮಗಳನ್ನು ಪಾಲಿಸುತ್ತಾ ಬಂದಿದೆ. ೨೦೨೨-೨೫ ನೇ ಸಾಲಿನ ಜಿಲ್ಲಾ ಸಂಘದ ಆಡಳಿತ ಮಂಡಳಿ ಅವಧಿಯ ಕೊನೆಯ ಸರ್ವಸದಸ್ಯರ ಸಭೆ ಇದಾಗಿದ್ದು, ಸದ್ಯದಲ್ಲೆ ಜಿಲ್ಲಾ ಸಂಘಕ್ಕೆ ನೂತನ ಕಾರ್ಯಕಾರಿ ಮಂಡಳಿ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದೆ. ಪತ್ರಕರ್ತರ ಸಂಘದ ಎಲ್ಲಾ ಸದಸ್ಯರುಗಳು ಜು. 26 ರಂದು ನಡೆಯಲಿರುವ ಸರ್ವ ಸದಸ್ಯರ ಸಭೆಯಲ್ಲಿ  ಭಾಗಹಿಸುವ ಮೂಲಕ ಸಂಘದ ಬಲವರ್ಧನೆಗೆ ಸಹಕರಿಸಬೇಕಾಗಿ ಎನ್. ರವಿಕುಮಾರ್ ಮನವಿ ಮಾಡಿಕೊಂಡರು.

ಪತ್ರಿಭಾಪುರಸ್ಕಾರ-ಸಾಧಕರ ಪತ್ರಕರ್ತರಿಗೆ ಸನ್ಮಾನ

ಮಾಧ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಪ್ರಶಸ್ತಗಳಿಂದ ಪುರಸ್ಕೃತರಾದ ಜಿಲ್ಲೆಯ ಪತ್ರಕರ್ತರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಗುತ್ತಿದೆ.
ಕರ್ನಾಟಕ ಮಾಧ್ಯಮ ಆಕಾಡೆಮಿ ಪ್ರಶಸ್ತಿ ಪುರಸ್ಕೃತ ಆರುಂಡಿ ಶ್ರೀನಿವಾಸ್, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ದಿ.ಹಿಂದೂ ಪತ್ರಿಕೆಯ ವರದಿಗಾರ ಜಿ.ಟಿ ಸತೀಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಂಡಿಬೆಲೆ ಶಾಮಣ್ಣ ಪ್ರಶಸ್ತಿ ಪಡೆದ ರವಿಬಿದನೂರು (ವಿಜಯವಾಣಿ), ಮಿಂಚು ಶ್ರೀನಿವಾಸ್ ಪ್ರಶಸ್ತಿ ಪಡೆದ ಚಂದ್ರಶೇಖರ್ ಶೃಂಗೇರಿ (ವಿಜಯವಾಣಿ), ಎಸ್ ಹೆಚ್ ರಂಗಸ್ವಾಮಿ ಪ್ರಶಸ್ತಿ ಪುರಸ್ಕೃತ ಗಿರೀಶ್ ಉಮ್ರಾಯಿ,  ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ ಪುರಸ್ಕೃತ ಕವಿತಾ ( ಸಂಯುಕ್ತಕರ್ನಾಟಕ) ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ತೀರ್ಪುಗಾರರ ಸೆನ್ಸಾರ್ ಮಂಡಳಿ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತ ವೈದ್ಯನಾಥನ್ ಹಚ್. ಯು, ಕರ್ನಾಟಕ ಸರ್ಕಾರದ ಚಲನಚಿತ್ರ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿರುವ ಪತ್ರಿಭಾನ್ವಿತ ಪತ್ರಕರ್ತ ದೇಶಾದ್ರಿ ಹೊಸ್ಮನಿ ಅವರನ್ನು ಅಭಿನಂದಿಸಲಾಗುವುದು.

ಎಸ್ ಎಸ್ ಎಲ್ ಸಿ .ಪಿಯಸಿಯಲ್ಲಿ ಗರಿಷ್ಠ ಅಂಕಗಳಿಸಿದ ಪತ್ರಕರ್ತರ ಮಕ್ಕಳಾದ ಶರಣ್ಯನಾಯಕ್, ನವ ಎಸ್ ನಾಯಕ್, ರಘು ಸಮರ್ಥನಾಡಿಗ್, ವೈ ಎಸ್ ಅನಿಕೇತನ್, ವೈ ಎಸ್ ಆಯುಷ್, ಕೆ. ಎನ್ ಶ್ರೇಯಾ, ಸಮರ್ಥ ಎಸ್ ಕಿರುವಾಸೆ ಅವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಸಂಘದ ಪ್ರಧಾನಕಾರ್ಯದರ್ಶಿ ಅರುಣ್ ವಿ.ಟಿ. ಕಾರ್ಯದರ್ಶಿ ಸೋಮನಾಥ್ ಕೆ.ಆರ್ ಉಪಸ್ಥಿತರಿದ್ದರು.


Previous Post Next Post