ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ !
ಹೊಸನಗರ : ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.5 ಶನಿವಾರ) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.
ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.05 ರ ಶನಿವಾರ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.
Tags:
ಮಳೆ