ಸಾಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ! Rain Efect

ಸಾಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ !
ಸಾಗರ : ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.5 ಶನಿವಾರ) ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ.

ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು,  ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.05 ರ ಶನಿವಾರ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.
Previous Post Next Post