ಆರಿದ್ರಾ ಮಳೆಯ ಅಬ್ಬರ - ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ
ತೀರ್ಥಹಳ್ಳಿ: ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ 3-7-25 ರ ಗುರುವಾರ ರಜೆಯನ್ನು ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ.
ಕಳೆದ 24 ಗಂಟೆಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿದ್ದು ಇದರಿಂದ ಮಕ್ಕಳಿಗೆ ಆರೋಗ್ಯದಲ್ಲಿ ತೊಂದರೆಯಾಗುವ ಮುನ್ಸೂಚನೆಯಿಂದ ರಜೆ ಘೋಷಿಸಲಾಗಿದೆ. ಈಗ ನೀಡಿರುವ ರಜೆಯನ್ನು ಮುಂದಿನ ಶನಿವಾರದಂದು ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ.
Tags:
ಮಳೆ