ಮಳೆಯ ಅಬ್ಬರ - ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಹೊಸನಗರ: ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ 4-7-25 ರ ಶುಕ್ರವಾರ ರಜೆಯನ್ನು ಘೋಷಿಸಿ ತಹಸೀಲ್ದಾರ್ ರಶ್ಮಿ ಆದೇಶ ಹೊರಡಿಸಿದ್ದಾರೆ.
ಅತಿಯಾದ ಮಳೆಯಾಗುತ್ತಿದ್ದು ಇದರಿಂದ ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಮಕ್ಕಳಿಗೆ ತೊಂದರೆಯಾಗುವ ಮುನ್ಸೂಚನೆಯಿಂದ ರಜೆ ಘೋಷಿಸಲಾಗಿದೆ. ಈಗ ನೀಡಿರುವ ರಜೆಯನ್ನು ಮುಂದಿನ ಶನಿವಾರದಂದು ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ.
Tags:
ಮಳೆ
