ಮುಂದುವರಿದ ಮಳೆಯ ಅಬ್ಬರ - ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಸಾಗರ: ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಸಾಗರ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.
ತಾಲೂಕಿನಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು ಇದರಿಂದ ಶಾಲಾ ಮಕ್ಕಳಿಗೆ ಆರೋಗ್ಯದಲ್ಲಿ ತೊಂದರೆಯಾಗುವ ಮುನ್ಸೂಚನೆಯಿಂದ 4-7-25 ರ ಶುಕ್ರವಾರ ರಜೆ ಘೋಷಿಸಲಾಗಿದೆ. ಈಗ ನೀಡಿರುವ ರಜೆಯನ್ನು ಮುಂದಿನ ಶನಿವಾರದಂದು ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ.
Tags:
ಸಾಗರ