ಸಿಗಂದೂರು ಸೇತುವೆ ಉದ್ಘಾಟಿಸಿದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ Sigandooru Bridge

ಸಿಗಂದೂರು ಸೇತುವೆ ಉದ್ಘಾಟಿಸಿದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ 


ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ ಎರಡನೇ ಅತಿ ಉದ್ದದ ತೂಗು​ಸೇತುವೆಯನ್ನು ಇಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರು ಲೋಕಾರ್ಪಣೆ ಮಾಡಿದ್ದಾರೆ.

ಇದಕ್ಕೂ ಮುನ್ನ ಸಚಿವ ಗಡ್ಕರಿ ಹೋಮದಲ್ಲಿ ಭಾಗಿಯಾಗಿ, ಶರಾವತಿ ನದಿಗೆ ಬಾಗಿನ ಅರ್ಪಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ.ಧನಂಜಯ್ ಸರ್ಜಿ ಸೇರಿದಂತೆ ಸ್ಥಳೀಯ ಜನರು ಭಾಗವಹಿಸಿದ್ದರು. ವೇದಿಕೆ ಕಾರ್ಯಕ್ರಮ ಸಾಗರದಲ್ಲಿ ನಡೆಯಲಿದೆ.
ಈ ಸೇತುವೆಯು ಶರಾವತಿ ದ್ವೀಪದ ಜನರ ದಶಕಗಳ ಬೇಡಿಕೆಯಾಗಿತ್ತು. 2010ರಲ್ಲಿ ಪ್ರಾರಂಭವಾದ ನಿರ್ಮಾಣ ಕಾರ್ಯ 2025ರಲ್ಲಿ ಮುಕ್ತಾಯವಾಗಿದೆ. ಸುಮಾರು 423.15 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸೇತುವೆ ನಿರ್ಮಾಣಕ್ಕೆ ಸಾಗರ ಪಟ್ಟಣದಿಂದ ಹೊಸನಗರ ತಾಲೂಕಿನ ಮರಕುಟುಕದ ವರೆಗೆ ಗ್ರಾಮೀಣ ಭಾಗದ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ಡರ್ಜೆಗೇರಿಸಿ ಮೊದಲ ಹಂತದಲ್ಲಿ ಸೇತುವೆ ನಿರ್ಮಿಸಲಾಗಿದೆ.



Previous Post Next Post