ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನಾಂಕ ಘೋಷಣೆ - ಸೇತುವೆಗೆ ಯಾರ ಹೆಸರು ಇಡ್ತಾರೆ? - ಯಾರೆಲ್ಲ ಉದ್ಘಾಟನೆಗೆ ಬರ್ತಾರೆ ???
ಶಿವಮೊಗ್ಗ : ಸಾಗರದ ಕಳಸವಳ್ಳಿ – ಅಂಬಾರಗೊಡ್ಲು (ಸಿಗಂದೂರು) ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಆಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜುಲೈ 14ರಂದು ಸಿಗಂದೂರು ಸೇತುವೆ ಲೋಕಾರ್ಪಣೆಯಾಗಲಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಪ್ರಹ್ಲಾದ ಜೋಶಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರನ್ನೀಡಲು ರಾಜ್ಯ ಸರಕಾರ ಶಿಫಾರಸು ಮಾಡಲಿ ಎಂದು ಅಗ್ರಹಿಸಿದರು..
ಲಿಂಗನಮಕ್ಕಿ ಜಲಾಶಯ ನಿರ್ಮಾಣದ ನಂತರ ಸಂಪರ್ಕ ತೊಂದರೆಯಾಗಿತ್ತು. ಹೋರಾಟಗಾರರ ತಪಸ್ಸಿನ ಫಲ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಮುಖಂಡರ ಪ್ರಯತ್ನದ ಫಲದಿಂದ ಸೇತುವೆ ನಿರ್ಮಾಣವಾಗಿದೆ. ಬರೋಬ್ಬರಿ 470 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ದೇಶದ 2 ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಇದಾಗಿದೆ. ಈ ಸೇತುವೆಯ ಕಾಮಗಾರಿ 2020 ರ ಡಿಸೆಂಬರ್ ನಲ್ಲಿ ಆರಂಭವಾಗಿತ್ತು ಎಂದರು.
ಸಿಗಂದೂರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ. ಚೌಡೇಶ್ವರಿ ಅಮ್ಮನವರು ಇಲ್ಲಿ ನೆಲೆನಿಂತು ಭಕ್ತರನ್ನು ಹರಸುತ್ತಾಳೆ. ತಾಯಿಯನ್ನು ಸಿಗಂದೂರೇಶ್ವರಿ ಎಂದೂ ಕರೆಯುತ್ತಾರೆ. ಸಿಗಂಧೂರಿಗೆ ಬರುವ ಪ್ರವಾಸಿಗರ ಪ್ರಮುಖ ಆಕರ್ಷಣೆ ಇಲ್ಲಿನ ಲಾಂಚ್. ಸದ್ಯ, ಸಿಗಂದೂರು ಸೇತುವೆ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಸದ್ಯದಲ್ಲೇ ಪ್ರವಾಸಿಗರಿಗೆ ಈ ಸೇತುವೆ ಮುಕ್ತವಾಗಲಿದೆ..ಈಗಾಗಲೇ ಒಂದು ಬಾರಿಯ ಸೇತುವೆಯ ಲೋಡ್ ಟೆಸ್ಟಿಂಗ್ ನೆಡೆದಿದ್ದೂ ಎಲ್ಲರ ಗಮನ ಸೆಳೆದಿದೆ ಎಂದರು.
ಈ ಸೇತುವೆ ಸುಮಾರು 2.14 ಕಿ.ಮೀ ಉದ್ದ ಹಾಗೂ 16 ಮೀಟರ್ ಅಗಲವಿದೆ. ಸೇತುವೆ ಕಾಮಗಾರಿಯು 2020ರ ಡಿಸೆಂಬರ್‌ನಲ್ಲಿ ಪ್ರಾರಂಭವಾಗಿತ್ತು. ಕೋವಿಡ್ ಹಾಗೂ ಹೆಚ್ಚಿನ ಪ್ರಮಾಣದ ಹಿನ್ನೀರಿನ ಕಾರಣ ಆರಂಭದ ಎರಡು ವರ್ಷ ನಿಧಾನವಾಗಿ ಸಾಗಿದ ಕಾಮಗಾರಿ ಕೆಲಸ ನಂತರ ವೇಗ ಪಡೆದಿತ್ತು. ಸಿಗಂದೂರು ಸೇತುವೆ ನಿರ್ಮಾಣದಿಂದಾಗಿ ಶರಾವತಿ ಹಿನ್ನೀರು ಭಾಗದ ಜನರ ಓಡಾಟಕ್ಕೆ ದೊಡ್ಡ ಸಹಾಯ ಆಗುತ್ತದೆ, ಮತ್ತೊಂದೆಡೆ ಶಿವಮೊಗ್ಗ ಪ್ರವಾಸೋದ್ಯಮಕ್ಕೆ ದೊಡ್ಡ ಬೂಸ್ಟರ್ ಸಿಕ್ಕಂತಾಗುತ್ತದೆ ಎಂದರು.ಸಾಗರದ ಕಳಸವಳ್ಳಿ – ಅಂಬಾರಗೊಡ್ಲು (ಸಿಗಂದೂರು) ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಆಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜುಲೈ 14ರಂದು ಸಿಗಂದೂರು ಸೇತುವೆ ಲೋಕಾರ್ಪಣೆಯಾಗಲಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಪ್ರಹ್ಲಾದ ಜೋಶಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರನ್ನೀಡಲು ರಾಜ್ಯ ಸರಕಾರ ಶಿಫಾರಸು ಮಾಡಲಿ ಎಂದು ಅಗ್ರಹಿಸಿದರು..
ಲಿಂಗನಮಕ್ಕಿ ಜಲಾಶಯ ನಿರ್ಮಾಣದ ನಂತರ ಸಂಪರ್ಕ ತೊಂದರೆಯಾಗಿತ್ತು. ಹೋರಾಟಗಾರರ ತಪಸ್ಸಿನ ಫಲ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಮುಖಂಡರ ಪ್ರಯತ್ನದ ಫಲದಿಂದ ಸೇತುವೆ ನಿರ್ಮಾಣವಾಗಿದೆ. ಬರೋಬ್ಬರಿ 470 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ದೇಶದ 2 ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಇದಾಗಿದೆ. ಈ ಸೇತುವೆಯ ಕಾಮಗಾರಿ 2020 ರ ಡಿಸೆಂಬರ್ ನಲ್ಲಿ ಆರಂಭವಾಗಿತ್ತು ಎಂದರು.
ಸಿಗಂದೂರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ. ಚೌಡೇಶ್ವರಿ ಅಮ್ಮನವರು ಇಲ್ಲಿ ನೆಲೆನಿಂತು ಭಕ್ತರನ್ನು ಹರಸುತ್ತಾಳೆ. ತಾಯಿಯನ್ನು ಸಿಗಂದೂರೇಶ್ವರಿ ಎಂದೂ ಕರೆಯುತ್ತಾರೆ. ಸಿಗಂಧೂರಿಗೆ ಬರುವ ಪ್ರವಾಸಿಗರ ಪ್ರಮುಖ ಆಕರ್ಷಣೆ ಇಲ್ಲಿನ ಲಾಂಚ್. ಸದ್ಯ, ಸಿಗಂದೂರು ಸೇತುವೆ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಸದ್ಯದಲ್ಲೇ ಪ್ರವಾಸಿಗರಿಗೆ ಈ ಸೇತುವೆ ಮುಕ್ತವಾಗಲಿದೆ..ಈಗಾಗಲೇ ಒಂದು ಬಾರಿಯ ಸೇತುವೆಯ ಲೋಡ್ ಟೆಸ್ಟಿಂಗ್ ನೆಡೆದಿದ್ದೂ ಎಲ್ಲರ ಗಮನ ಸೆಳೆದಿದೆ ಎಂದರು.
ಈ ಸೇತುವೆ ಸುಮಾರು 2.14 ಕಿ.ಮೀ ಉದ್ದ ಹಾಗೂ 16 ಮೀಟರ್ ಅಗಲವಿದೆ. ಸೇತುವೆ ಕಾಮಗಾರಿಯು 2020ರ ಡಿಸೆಂಬರ್‌ನಲ್ಲಿ ಪ್ರಾರಂಭವಾಗಿತ್ತು. ಕೋವಿಡ್ ಹಾಗೂ ಹೆಚ್ಚಿನ ಪ್ರಮಾಣದ ಹಿನ್ನೀರಿನ ಕಾರಣ ಆರಂಭದ ಎರಡು ವರ್ಷ ನಿಧಾನವಾಗಿ ಸಾಗಿದ ಕಾಮಗಾರಿ ಕೆಲಸ ನಂತರ ವೇಗ ಪಡೆದಿತ್ತು. ಸಿಗಂದೂರು ಸೇತುವೆ ನಿರ್ಮಾಣದಿಂದಾಗಿ ಶರಾವತಿ ಹಿನ್ನೀರು ಭಾಗದ ಜನರ ಓಡಾಟಕ್ಕೆ ದೊಡ್ಡ ಸಹಾಯ ಆಗುತ್ತದೆ, ಮತ್ತೊಂದೆಡೆ ಶಿವಮೊಗ್ಗ ಪ್ರವಾಸೋದ್ಯಮಕ್ಕೆ ದೊಡ್ಡ ಬೂಸ್ಟರ್ ಸಿಕ್ಕಂತಾಗುತ್ತದೆ ಎಂದರು.