ನಾಳೆ ಸರ್ಕಾರಿ ಆಸ್ಪತ್ರೆ ಎದುರು ಸೊಪ್ಪುಗುಡ್ಡೆ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ..! Soppugudde Raghavendra.

ನಾಳೆ ಸರ್ಕಾರಿ ಆಸ್ಪತ್ರೆ ಎದುರು ಸೊಪ್ಪುಗುಡ್ಡೆ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ..!

ವೈದ್ಯರ ವರ್ಗಾವಣೆ ಖಂಡಿಸಿ ಹೋರಾಟ..!
ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಸರಕಾರ ಏಕಾಏಕಿ ತೀರ್ಥಹಳ್ಳಿ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ಆರು ಪ್ರಮುಖ ವೈದ್ಯರನ್ನ ವರ್ಗಾವಣೆ ಮಾಡಬೇಕೆಂದು ಆದೇಶ ಹೊರಡಿಸಿದ್ದು ಈ ವಿಚಾರವಾಗಿ ನಾಳೆ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆ ಎದುರು ಸೊಪ್ಪುಗುಡ್ಡೆ ರಾಘವೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ..

 ದಶಕಗಳಿಂದ ಕಾರಿಗೆ ನಿರ್ವಹಿಸುತ್ತಿದ್ದ ಪ್ರಮುಖ ವೈದ್ಯರನ್ನ ಏಕಾಏಕಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಪಟ್ಟಣ ಪಂಚಾಯತ್ ಬಿಜೆಪಿ ಸದಸ್ಯರಾದ ಸೊಪ್ಪುಗುಡ್ಡೆ ರಾಘವೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಸಂಘ, ಆಟೋ ಚಾಲಕರು ಮತ್ತು ಮಾಲೀಕರ ಸಂಘ, ಕಾರ್ಮಿಕರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿ  ಸೇರಿದಂತೆ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.

9 ಜನರಿದ್ದ ವೈದ್ಯರ ಪೈಕಿ ಆರು ಪ್ರಮುಖ ವೈದ್ಯರನ್ನ ವರ್ಗಾವಣೆ ಮಾಡಿದ್ದು ಅದರಲ್ಲಿ ಅನಸ್ತೇಶಿಯ ತಜ್ಞರು, ಮಕ್ಕಳ ತಜ್ಞರು, ಮೂಳೆ ತಜ್ಞರು, ಕಣ್ಣಿನ ತಜ್ಞರು, ಕಿವಿ ಮೂಗು ಗಂಟಲು ತಜ್ಞರನ್ನು ವರ್ಗಾವಣೆ ಮಾಡಲಾಗಿದ್ದು ಆ ಜಾಗಕ್ಕೆ ಯಾವೊಬ್ಬ ವೈದ್ಯರನ್ನು ಕೂಡ ಇಲ್ಲಿಯವರೆಗೂ ನೇಮಕ ಮಾಡಿಲ್ಲ. ಇಲ್ಲಿದ್ದ ವೈದ್ಯರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ ಎಂಬುದಾಗಿ ಖಂಡಿಸುವ ಸಲುವಾಗಿ 
 ಸೊಪ್ಪುಗುಡ್ಡೆ ರಾಘವೇಂದ್ರ ಅವರ ನೇತೃತ್ವದಲ್ಲಿ ಬೆಳಗ್ಗೆ 10 ಗಂಟೆಯಿಂದ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆ ಹೆಸರು ಹೋರಾಟ ಮಾಡಲಾಗುತ್ತಿದೆ.

ಈ ಒಂದು ಹೋರಾಟದಲ್ಲಿ ಪಕ್ಷಾತೀತವಾಗಿ ಹಾಗೂ ಸಾರ್ವಜನಿಕರು ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ..
Previous Post Next Post