ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ..! Transfer

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ..!

ಹೊಸನಗರ : ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಶ್ಮಿ ಹೆಚ್. ಅವರನ್ನು ಹೊಸನಗರದಿಂದ ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು.

ಸಾಗರದ ತಹಶೀಲ್ದಾರ್ ಆಗಿದ್ದ ಚಂದ್ರಶೇಖರ್ ನಾಯಕ್ ಅವರಿಗೆ ಸ್ಥಳ ನಿರೀಕ್ಷೆಯಲ್ಲಿ ಇರಿಸಲಾಗಿದೆ. ಈ ಸಂಬಂಧ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ರಶ್ಮಿ ಹೆಚ್.ಜೆ. ಅವರು ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.




Previous Post Next Post