ತುಂಗಾ ನದಿಗೆ ಬಾಗಿನ ಅರ್ಪಿಸಿದ ಶಾಸಕ ಚನ್ನಬಸಪ್ಪ tunga river

ತುಂಗಾ ನದಿಗೆ ಬಾಗಿನ ಅರ್ಪಿಸಿದ ಶಾಸಕ ಚನ್ನಬಸಪ್ಪ
ಶಿವಮೊಗ್ಗ : ಮಲೆನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜೀವ ನದಯಾದ ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು ಇಂದು ಶಾಸಕ ಚನ್ನಬಸಪ್ಪರವರು ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ನದಿಗೆ ಬಾಗಿನ ಅರ್ಪಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿ  ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಶಿವಮೊಗ್ಗದ ಜೀವನಾಡಿಯಾದ ತಾಯಿ ತುಂಗಾ ಮಾತೆಯು ಮೈದುಂಬಿ ಹರಿಯುತ್ತಿರುವ ಈ ಪವಿತ್ರ ಸಂದರ್ಭದಲ್ಲಿ, ನದಿಯ ಪರಿಪೂರ್ಣತೆಯ ಗೌರವಾರ್ಥವಾಗಿ ಹಾಗೂ ಪ್ರಕೃತಿ ಪ್ರತಿಯೊಂದು ಕಣಕ್ಕೂ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿಬಾಗಿನ ಅರ್ಪಣೆ ಮಾಡಿದ್ದೇವೆ ಎಂದರು.


ತುಂಗಾ ನದಿ ರಾಜ್ಯದ ಕೃಷಿ, ಕುಡಿಯುವ ನೀರು ಮತ್ತು ಪರಿಸರ ಸಮತೋಲನದ ಪ್ರಮುಖ ಮೂಲವಾಗಿದ್ದು, ತುಂಗೆಗೆ ಬಾಗಿನ ಅರ್ಪಿಸುವುದು ನಮ್ಮ ಸಂಸ್ಕೃತಿ ಪರಂಪರೆಯ ಪ್ರತಿಬಿಂಬವಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಎನ್‌.ಕೆ ಜಗದೀಶ್ ಹಾಗೂ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಹರಿಕೃಷ್ಣ, ಮಾಲತೇಶ್, ಮಾಜಿ ಸೂಡಾ ಅಧ್ಯಕ್ಷರಾದ ಎನ್ ಜೆ  ನಾಗರಾಜ, ಎಸ್ ಜ್ಞಾನೇಶ್ವರ್, ಮಾಜಿ ಮಹಾ ನಗರ ಪಾಲಿಕೆ ಸದಸ್ಯರಾದ ಪ್ರಭು, ಸುರೇಖಾ ಮುರಳಿಧರ್  ಸೇರಿ ವಿವಿಧ ಮೋರ್ಚಾಗಳ ಸದಸ್ಯರು, ಧಾರ್ಮಿಕ ಮುಖಂಡರು, ಕಾರ್ಯಕರ್ತರು ಹಾಗೂ ನಾಗರಿಕರು ಉಪಸ್ಥಿತರಿದ್ದರು.



Previous Post Next Post