ಫುಟ್ಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಹಾಗೂ ಬಾಲಕರ ವಿಭಾಗದಲ್ಲಿ ಐದು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ Christ King

ಫುಟ್ಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಹಾಗೂ ಬಾಲಕರ ವಿಭಾಗದಲ್ಲಿ ಐದು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ, ಜೇಸಿಸ್ ವಿದ್ಯಾಸಂಸ್ಥೆ ಕಾರ್ಕಳ ಇವರ ಆಶ್ರಯದಲ್ಲ್ಲಿ ನಿಟ್ಟೆಯ ಬಿ.ಸಿ.ಆಳ್ವ ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ಮತ್ತು ಬಾಲಕಿಯರ ವಿಭಾಗಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಒಟ್ಟು 16 ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. 

ಬಾಲಕಿಯರ ವಿಭಾಗದಲ್ಲಿ ತಂಡವು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರೆ ಬಾಲಕರ ವಿಭಾಗದಲ್ಲಿ ತಂಡವು ದ್ವಿತೀಯ ಸ್ಥಾನ ಪಡೆದು ತಂಡವನ್ನು ಪ್ರತಿನಿಧಿಸಿದ್ದ ಐದು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Previous Post Next Post