ಮಳೆ ಅಬ್ಬರ - ಶಿವಮೊಗ್ಗ ಜಿಲ್ಲೆಯ ಐದು ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ Rain effect

ಮಳೆ  ಅಬ್ಬರ - ಶಿವಮೊಗ್ಗ ಜಿಲ್ಲೆಯ ಐದು ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿವಮೊಗ್ಗ :  ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು (ಆ.29)  ಹೊಸನಗರ, ಸಾಗರ, ಶಿವಮೊಗ್ಗ, ಮತ್ತು ಶಿಕಾರಿಪುರ ಹಾಗೂ ಸೊರಬ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರ್ ಆದೇಶಿಸಿದ್ದಾರೆ.

ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಆ. 29 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿವಸಗಳಲ್ಲಿ ತರಗತಿಗಳನ್ನು ನಡೆಸಿ ಪಾಠ ಪ್ರವಚನಗಳನ್ನು ಸರಿದೂಗಿಸಲು ಆದೇಶಿಸಲಾಗಿದೆ.
Previous Post Next Post