ನಾಳೆ ತೀರ್ಥಹಳ್ಳಿಯಲ್ಲಿ ತಹಸೀಲ್ದಾರ್ ಹಾಗೂ ಡಿವೈಎಸ್'ಪಿ ನೇತೃತ್ವದಲ್ಲಿ ಸೌಹಾರ್ದ ಸಭೆ..!
ತೀರ್ಥಹಳ್ಳಿ : ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ನಾಳೆ ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಶಾಂತಿ ಸೌಹಾರ್ದ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಬೆಳಗ್ಗೆ 11 ಗಂಟೆಗೆ ಶಾಂತಿ ಸೌಹಾರ್ದ ಸಭೆಯಲ್ಲಿ ಎಲ್ಲಾ ಗಣಪತಿ ಸಮಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಭಾಗಿಯಾಗಬೇಕು ಹಾಗೆಯೇ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮಸೀದಿಗಳ ಅಧ್ಯಕ್ಷರುಗಳು ಮತ್ತು ಮುಸ್ಲಿಂ ಮುಖಂಡರುಗಳು ಹಾಜರಿರಬೇಕು ಎಂದು ತಿಳಿಸಲಾಗಿದೆ.
ತಹಸೀಲ್ದಾರ್ ರಂಜಿತ್ ಎಸ್ ಹಾಗೂ ಡಿವೈಎಸ್'ಪಿ ಅರವಿಂದ್ ಕಲಗುಜ್ಜಿ ನೇತೃತ್ವದಲ್ಲಿ ಈ ಸೌಹಾರ್ದ ಸಭೆ ನಡೆಯಲಿದೆ. ಸಭೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆ ವಿಚಾರವಾಗಿ ಚರ್ಚೆ ನಡೆಯಲಿದೆ. ಎಲ್ಲರೂ ತಪ್ಪದೆ ಭಾಗಿಯಾಗಲು ಕೋರಲಾಗಿದೆ..
Tags:
ತೀರ್ಥಹಳ್ಳಿ ಸುದ್ದಿ