ಕ್ರಿಕೆಟ್ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ Christ King

ಕ್ರಿಕೆಟ್ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕಾರ್ಕಳ : ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಇವರ ಸಹಯೋಗದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಗೊಂಡಿದೆ. ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ರಸಾದ್ ತಂಡವನ್ನು ತರಬೇತುಗೊಳಿಸಿದ್ದರು.

 
Previous Post Next Post