ಭದ್ರಾವತಿಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ?? - FIR ದಾಖಲು - ಎಸ್'ಪಿ ಹೇಳಿದ್ದೇನು?? Bhadravati

ಭದ್ರಾವತಿಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ?? -  FIR ದಾಖಲು -  ಎಸ್'ಪಿ ಹೇಳಿದ್ದೇನು??

ಭದ್ರಾವತಿ: ನಗರದಲ್ಲಿ ನಡೆದ ಮೆರವಣಿಗೆ ವೇಳೆ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಕುರಿತಂತೆ ವೀಡಿಯೋವೊಂದು ವೈರಲ್ ಆಗಿದೆ ಎಂದು ಆರೋಪಿಸಲಾಗಿದ್ದು, ಮೆರವಣಿಗೆಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ಯುವಕರ ಗುಂಪು ಮೊಬೈಲ್ ಟಾರ್ಚ್'ಗಳನ್ನು ಹಿಡಿದು ನಿಂತಿರುವ ವೇಳೆ, ಮಧ್ಯದಲ್ಲಿದ್ದ ಯುವಕರ ಪೈಕಿ ಕೆಲವರು ಪಾಕಿಸ್ಥಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.

ಎಸ್'ಪಿ ಮಿಥುನ್ ಕುಮಾರ್ ಹೇಳಿದ್ದೇನು??

ಈ ಕುರಿತ ವೀಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾ ಪೊಲೀಸರು ಎಫ್'ಐಆರ್ ದಾಖಲಿಸಲು ಸಿದ್ದತೆ ನಡೆಸಿದ್ದಾರೆ. ಈ ಕುರಿತಂತೆ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಭದ್ರಾವತಿಯಲ್ಲಿ ನಿನ್ನೆ ಪಾಕಿಸ್ಥಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಭದ್ರಾವತಿಯಲ್ಲಿ ಎಫ್'ಐಆರ್ ದಾಖಲಿಸಲಾಗುತ್ತಿದೆ. ಘೋಷಣೆ ಕೂಗಿದವರು ಯಾರು, ವಿಡಿಯೋದ ಅಸಲಿಯತ್ತನ್ನು ಪರಿಶೀಲಿಸಾಗುತ್ತಿದೆ. ತನಿಖೆ ನಡೆಯಲಿದೆ ಎಂದಿದ್ದಾರೆ.
Previous Post Next Post